ಕೂಡಿಗೆ, ಜು. 27: ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ. ರವಿ ಅವರು ಮುಂಬಡ್ತಿ ಹೊಂದಿದ್ದು, ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರಿಗೆ ಕೂಡಿಗೆ ಗ್ರಾಮ ಪಂಚಾಯಿತಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಉಪಾಧ್ಯಕ್ಷ ಕೆ.ಟಿ. ಗಿರೀಶ್, ಸದಸ್ಯರಾದ ಟಿ.ಕೆ. ವಿಶ್ವನಾಥ್, ಮಂಜಯ್ಯ, ಕೆ.ವೈ. ರವಿ, ಕೃಷ್ಣ, ರಾಮಚಂದ್ರ, ಹೆಚ್.ಎಸ್. ರವಿ, ಪುಷ್ಪ, ಕಲ್ಪನಾ, ಮೋಹಿನಿ, ರತ್ನಮ್ಮ, ಚಂದ್ರಿಕ, ದಸ್ವಿ, ಅಭಿವೃದ್ಧಿ ಅಧಿಕಾರಿ ಅಶ್ವಿನಿ ಸೇರಿದಂತೆ ಸಿಬ್ಬಂದಿ ವರ್ಗ ಮತ್ತಿತರರು ಇದ್ದರು.