ಸೋಮವಾರಪೇಟೆ, ಜು. 27: ಬ್ಯಾಂಕ್ ಆಫ್ ಬರೋಡ ಐಗೂರು ಶಾಖೆಯಲ್ಲಿ ‘ಫೌಂಡರ್ಸ್ ಡೇ’ ಪ್ರಯುಕ್ತ ಐಗೂರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರಗಳನ್ನು ಬ್ಯಾಂಕ್‍ನ ವ್ಯವಸ್ಥಾಪಕ ಅನೂಪ್ ವಿತರಿಸಿದರು. ಈ ಸಂದರ್ಭ ಶಾಲೆಯ ಹಿರಿಯ ಶಿಕ್ಷಕಿ ಅನಿತಾ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ಸೇರಿದಂತೆ ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.