ಸೋಮವಾರಪೇಟೆ, ಜು. 27: ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದರು.

ಇಲ್ಲಿನ ಖಾಸಗಿ ಬಸ್‍ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ, ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ, ಶಾಸಕ ಅಪ್ಪಚ್ಚು ರಂಜನ್ ಪರ ಯಘೋಷ ಮೊಳಗಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ಈ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಪಕ್ಷದ ತಾಲೂಕು ಕಾರ್ಯದರ್ಶಿ ಮನುಕುಮಾರ್ ರೈ, ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ತಾಲೂಕು ಕಾರ್ಯದರ್ಶಿ ಶರತ್, ಪ.ಪಂ. ಸದಸ್ಯರುಗಳಾದ ನಳಿನಿ ಗಣೇಶ್, ಬಿ.ಆರ್. ಮಹೇಶ್ ಸೇರಿದಂತೆ ಪ್ರಮುಖರುಗಳಾದ ಹರಗ ಉದಯ, ಕೊಮಾರಿ ಸತೀಶ್, ಪ್ರಜಾ ಪೂಣಚ್ಚ, ಜಗನ್ನಾಥ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.