ಮಡಿಕೇರಿ, ಜು. 27: ಪ್ರಸಕ್ತ(2019-20) ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.

5 ಮತ್ತು 6ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಾದ ಸಂತ ಜೋಸೆಫರ ಶಾಲೆ, ಮಡಿಕೇರಿ ಹಾಗೂ ಸಾಯಿಶಂಕರ ವಿದ್ಯಾಸಂಸ್ಥೆ, ಪೊನ್ನಂಪೇಟೆಯಲ್ಲಿ 6 ಮತ್ತು 8ನೇ ತರಗತಿಗೆ ಪ್ರವೇಶ ಕಲ್ಪಿಸಲಾಗುವದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು).

ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂರವಾಣಿ ಸಂಖ್ಯೆ 08272-225531, ಹಾಗೂ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-223552 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ

ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ ಹಾಗೂ ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾದರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 1.50 ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ. 2 ಲಕ್ಷ ಮಿತಿಯಿರಬೇಕು. ಅರ್ಜಿದಾರರ ಕುಟುಂಬದ ಯಾವದೇ ಸದಸ್ಯರು ಸರ್ಕಾರಿ ಮತ್ತು ಅರೆ ಸರ್ಕಾರ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5 ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್‍ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಕನಿಷ್ಟ 1.20 ಎಕರೆಯಿಂದ ಗರಿಷ್ಟ 5 ಎಕರೆ ಜಮೀನು ಹೊಂದಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.

ಅರ್ಜಿಯೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್‍ನ ಮೊದಲ ಪುಟದ ಪ್ರತಿ, ಯೋಜನಾ ವರದಿ, ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ), ವಾಹನವಾಗಿದ್ದಲ್ಲಿ, ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಾಹನ ಚಾಲನ ಪರವಾನಗಿ ಮತ್ತು ಬ್ಯಾಡ್ಜ್‍ನ ಪ್ರತಿ, 50 ವರ್ಷದೊಳಗಿರುವ ಬಗ್ಗೆ ದೃಢಿಕರಣ ಪತ್ರ, ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಚಾಲ್ತಿ ಪಹಣಿ (ಆರ್‍ಟಿಸಿ), ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ದ್ವಿಪ್ರತಿಯಲ್ಲಿ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಆಗಸ್ಟ್ 14 ರೊಳಗೆ ಸಲ್ಲಿಸುವದು. ಅರ್ಜಿಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ತಾಲೂಕು ಹಾಗೂ ತಾಲೂಕು ಕಲ್ಯಾಣಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪೊನ್ನಂಪೇಟೆ ಇಲ್ಲಿ ಉಚಿತವಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು.

ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಖಾಲಿಯಿರುವ 200 ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ದಿಂದ ಯಾವದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 2019ರ ಆಗಸ್ಟ್ 5 ಕ್ಕೆ ಅನ್ವಯವಾಗುವಂತೆ ಕನಿಷ್ಟ 21 ರಿಂದ 28 ವರ್ಷಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಸೇವಾ ನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಖಾಲಿಯಿರುವ ಒಟ್ಟು ಹುದ್ದೆಗಳಲ್ಲಿ ಸೇವಾನಿರತ ಇಲಾಖಾ ಸಿಬ್ಬಂದಿಗಳಿಗೆ 21, ಪುರುಷ ಅಭ್ಯರ್ಥಿ ಗಳಿಗೆ 138 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 41 ಹುದ್ದೆಗಳು ಮೀಸಲಿರಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಹಾಗೂ ಶುಲ್ಕ ಪಾವತಿಸಲು ಆಗಸ್ಟ್ 7 ಕೊನೆ ದಿನವಾಗಿದೆ. ಶುಲ್ಕ ವನ್ನು ಹೆಚ್‍ಡಿಎಫ್‍ಸಿ ಬ್ಯಾಂಕಿನ ಅಧಿಕೃತ ಶಾಖೆ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿ ಮಾಡಬಹು ದಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 250, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100 ಆಗಿದೆ. ಅರ್ಜಿ ಸಲ್ಲಿಸಲು ವೆಬ್‍ಸೈಟ್: ತಿತಿತಿ.ಞsಠಿ.gov.iಟಿನ್ನು ಸಂಪರ್ಕಿಸಬಹುದು.