ಕೂಡಿಗೆ, ಜು. 27: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವು ಹೆಗ್ಗಡಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸದಸ್ಯತ್ವ ನೋಂದಣಿಯ ಸಹ ಸಂಚಾಲಕರಾದ ಕೆ. ವರದ ನೋಂದಣಿ ಕಾರ್ಯಕ್ರಮದಲ್ಲಿ ಕೈಗೊಳ್ಳುವ ವಿಷಯಗಳ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡಿದರು. ಸದಸ್ಯತ್ವ ವಿಸ್ತಾರಕರ ಕಾರ್ಯಸೂಚಿ ಮತ್ತು ಪ್ರತಿ ಬೂತ್‍ನಲ್ಲಿ ಕನಿಷ್ಟ 10 ಸಸಿಗಳನ್ನು ನೆಡುವದು. ಜಲ ಸಂರಕ್ಷಣೆಗೆ ಕುರಿತು ಜಾಗೃತಿ ಹಾಗೂ ಶಾಲಾ ಆವರಣ, ಆಸ್ಪತ್ರೆ ಆವರಣ ಸ್ವಚ್ಛಗೊಳಿಸುವದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚಿಸಿ ಕಾರ್ಯಮುಖರಾಗಲು ತಿಳಿಸಿದರು.

ಈ ಸಂದರ್ಭ ತಾಲೂಕು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಸ್ತಾರಕರಾದ ವೈಶಾಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಲ್ಪನಾ, ಚಂದ್ರಿಕಾ, ಯುವ ಮೋರ್ಚಾದ ಅಧÀ್ಯಕ್ಷ ಚಿಣ್ಣಪ್ಪ ಸೇರಿದಂತೆ ಪಕ್ಷದ ಪ್ರಮುಖರು ಗ್ರಾಮಸ್ಥರು ಭಾಗವಹಿಸಿದ್ದರು.