ನಾಪೆÉÇೀಕ್ಲು, ಜು. 28: ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಆದೇಶದಂತೆ ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಮತ್ತು ಆಶಾ ಕಾರ್ಯಕರ್ತೆ ಚಂದ್ರಕಲಾ ಕ್ಷಯರೋಗ, ಡೆಂಗ್ಯೂ, ಚಿಕನ್ ಗುನ್ಯ ಮತ್ತಿತರ ರೋಗಗಳ ಬಗ್ಗೆ ಮನೆ, ಮನೆಗೆ ತೆರಳಿ ಮಾಹಿತಿ ಹಾಗೂ ಜಾಗೃತಿ ನೀಡಿದರು. ರೋಗದ ಲಕ್ಷಣಗಳು ಕಂಡು ಬಂದರೆ ಸಮೀಪದ ಆಸ್ಪತ್ರೆಗಳಲ್ಲಿ ಉಚಿತವಾಗಿ ಕಫ ಹಾಗೂ ಕ್ಷ-ಕಿರಣ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದರು.