ಮಡಿಕೇರಿ, ಜು. 29: ಅರೆ ವೈದ್ಯಕೀಯ ಕೋರ್ಸ್ಗಳ ತರಬೇತಿಗೆ ಅರೆ ವೈದ್ಯಕೀಯ ಮಂಡಳಿಯು ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದ್ದು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅರೆ ವೈದ್ಯಕೀಯ ವಿಭಾಗದಲ್ಲಿ 140 ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಮೆಡಿಕಲ್ ರೆಕಾಡ್ರ್ಸ್ ಟೆಕ್ನಾಲಜಿ ಕೋರ್ಸ್ನ್ನು ಹೊರತುಪಡಿಸಿ ಉಳಿದ ಎಲ್ಲಾ ಕೋರ್ಸ್ಗಳಿಗೆ ಪಿಯುಸಿ ವಿಜ್ಞಾನ, ತತ್ಸಮಾನ ಪರೀಕ್ಷೆ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು. ಎಸ್ಎಸ್ಎಲ್ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಟ 7 ವರ್ಷ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವದು.
ಕೋರ್ಸ್ನ ಅವಧಿಯು ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷ ಹಾಗೂ 3 ತಿಂಗಳು ಇಂಟರ್ನ್ಶಿಪ್ ಮತ್ತು ಎಸ್ ಎಸ್ಎಸ್ಎಲ್ಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 3 ತಿಂಗಳು ಇಂಟರ್ನ್ಶಿಪ್ಗಳಿರುತ್ತದೆ. ವಯೋಮಿತಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಬಾರದು. ಅರ್ಜಿ ನಮೂನೆಗಳನ್ನು ಮಂಡಳಿ ವೆಬ್ಸೈಟ್ hಣಣಠಿ://ತಿತಿತಿ.ಠಿmbಞಚಿಡಿಟಿಚಿಣಚಿಞಚಿ.oಡಿg ನಲ್ಲಿ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆ ದಿನವಾಗಿದೆ.
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.400 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗೆ ರೂ.250. ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕ ಡೆಬಿಟ್, ಕ್ರೆಡಿಟ್, ನೆಟ್ ಬ್ಯಾಂಕಿಗ್ ಮೂಲಕವೇ ಪಾವತಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ತಿಳಿಸಿದ್ದಾರೆ.
*ಪ್ರಸಕ್ತಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ಸ್ನಾತಕೋತ್ತರ, ನರ್ಸಿಂಗ್, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.bಚಿಛಿಞತಿಚಿಡಿಜeಛಿಟಚಿsses.ಞಚಿಡಿ.ಟಿiಛಿ ನ್ನು ನೋಡುವದು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ bಛಿತಿhosಣeಟಚಿಜmissioಟಿ@gmಚಿiಟ.ಛಿomಗೆ ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಸಹಾಯವಾಣಿ ದೂ.ಸಂ.080-65970006 ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ದೂರವಾಣಿ ಸಂಖ್ಯೆ ಮಡಿಕೇರಿ 9448205919, 08272-298037, ವೀರಾಜಪೇಟೆ 9448205919, 08274-2492511, ಸೋಮವಾರಪೇಟೆ 9632225847, 08272-284820, ಜಿಲ್ಲಾ ಕಚೇರಿ 08272-225628ನ್ನು ಸಂಪರ್ಕಿಸಬಹುದು.
*ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮಡಿಕೇರಿ 08272-229983. ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ 08274-261261. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552. ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115ಅನ್ನು ಸಂಪರ್ಕಿಸಬಹುದು.