ಮಡಿಕೇರಿ, ಜು. 29: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪ್ರೊ. ಅಮಥ್ರ್ಯಸೆನ್ ವೇದಿಕೆ ವತಿಯಿಂದ 2019-20ರ ಕೇಂದ್ರ ಬಜೆಟ್ ವಿಶ್ಲೇಷಣಾ ಕಾರ್ಯಕ್ರಮ ತಾ. 30 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಡಿ. ಹರ್ಷ, ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ದಯಾನಂದ ಕೆ.ಸಿ. ಉಪಸ್ಥಿತರಿರುವರು.