ಶನಿವಾರಸಂತೆ, ಜು. 29: ಕೊಡಗು ಜಿಲ್ಲಾ ವಾಣಿಜ್ಯೋಧ್ಯಮಿಗಳ ಸಂಘ ಹಾಗೂ ಕೈಗಾರಿಕಾ ಮಹಾಸಂಸ್ಥೆಯ ವಾರ್ಷಿಕ ಮಹಾಸಭೆ ಸಮೀಪದ ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾ. 31ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಸಂಸ್ಥೆಯ ಕೊಡ್ಲಿಪೇಟೆ ಸ್ಥಾನೀಯ ಸಮಿತಿ ಅಧ್ಯಕ್ಷ ಎಚ್.ಸಿ. ಯತೀಶ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಸುಬ್ರಹ್ಮಣ್ಯಾಚಾರ್, ವಾಣಿಜ್ಯೋದ್ಯಮಿ ಗಳ ಸಂಘ ಹಾಗೂ ಕೈಗಾರಿಕಾ ಮಹಾಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ಪ್ರಕಾಶ್ ಮತ್ತಿತರರು ಭಾಗವಹಿಸುವರು. ಸಮಾರಂಭದಲ್ಲಿ ಹಿರಿಯ ವರ್ತಕರಾದ ಎಂ.ಎಚ್. ಜಾವಿದ್ ಅಹಮ್ಮದ್, ತಾಂಡವ ಮೂರ್ತಿ ಹಾಗೂ ರೋಹಿಣಿ ಸುಬ್ರಹ್ಮಣ್ಯಾಚಾರ್ ಅವರನ್ನು ಸನ್ಮಾನಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.