ಸೋಮವಾರಪಟೆ, ಜು. 29: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಜಿಲ್ಲೆಯ ವಿವಿಧ ಮಠಾಧೀಶರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿದ ಸ್ವಾಮೀಜಿಗಳು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯ ಸರ್ವತೋಮುಖ ಅಭಿವೃದ್ಧಿ ಸಾಧಿಸಲಿ ಎಂದು ಆಶಿಸಿದರು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಬಸವಾಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠಾಧೀಶರಾದ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿಗಳು, ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ತೊರೆನೂರು ಮಠಾಧೀಶರಾದ ಮಲ್ಲೇಶ ಸ್ವಾಮೀಜಿ, ಮುದ್ದಿನ ಕಟ್ಟೆ ಮಠಾಧೀಶರಾದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.