ಮಡಿಕೇರಿ, ಜು.28 : ಕುಶಾಲನಗರದ ಗುಂಡೂರಾವ್ ಬಡಾವಣೆÉಯಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಆನ್‍ಲೈನ್ ಮೂಲಕ ಆಹ್ವಾನಿಸಿರುವ ಎಲ್ಲಾ ಅರ್ಜಿಗಳನ್ನು ರದ್ದುಪಡಿಸುವಂತೆ ಸ್ತ್ರೀಶಕ್ತಿ ಬ್ಲಾಕ್ ವಲಯ ಸೊಸೈಟಿ ಮತ್ತು ಮಾನವ ಹಕ್ಕು ಜನಜಾಗೃತಿ ವೇದಿಕೆ ಮಾಡಿದ ಮನವಿಯನ್ನು ಪುರಸ್ಕರಿಸಿರುವ ಜಿಲ್ಲಾಧಿಕಾರಿಗಳು ಅರ್ಜಿಗಳನ್ನು ರದ್ದುಪಡಿಸಿದ್ದಾರೆ ಎಂದು ವೇದಿಕೆಯ ಮಾಧ್ಯಮ ಸಲಹೆಗಾರ ಕೆ.ಟಿ.ಶ್ರೀನಿವಾಸ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಂಡೂರಾವ್ ಬಡಾವಣೆಯಲ್ಲಿ ನಿಯಮ ಬಾಹಿರವಾಗಿ ಅರ್ಜಿಗಳನ್ನು ಪಡೆಯಲಾಗಿದ್ದು, ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಕೂಡ ಪುರಸ್ಕರಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ, ಈ ಹಿಂದೆÀ ಪಡೆದಿದ್ದ 312 ಅರ್ಜಿಗಳನ್ನು ರದ್ದುಪಡಿಸುವಂತೆ ಕೋರಲಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಹಳೆಯ ಅರ್ಜಿಗಳನ್ನು ರದ್ದುಪಡಿಸಿ ಹೊಸ ಅರ್ಜಿಗಳ ಆಹ್ವಾನಕ್ಕೆ ಕ್ರಮ ಕೈಗೊಂಡಿದ್ದಾರೆ. ಬಡವರ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳ ಕ್ರಮ ಶ್ಲಾಘನಾರ್ಹವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.