ಮಡಿಕೇರಿ, ಜು. 29 : ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ಮತ ಯಾಚನೆಯಲ್ಲಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ನಗರದ ಇಂದಿರಾ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ವಿಜಯೋತ್ಸವದ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್ ಮಾತನಾಡಿ ಬಿಜೆಪಿ ಸರ್ಕಾರ ಇರುವದರಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಲಿದೆ. ದೇವರ ಆಶೀರ್ವಾದದೊಂದಿಗೆ ಮತ್ತೊಮ್ಮೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದರು.

ಅಪವಿತ್ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕುಂಟಿತಗೊಂಡಿತ್ತು ಎಂದು ಆರೋಪಿಸಿದ ಅವರು, ಇದೀಗ ಯಡಿಯೂರಪ್ಪ ಅವರು ಬಂದ ತಕ್ಷಣ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯ ಸರ್ಕಾರದಿಂದ ನಾಲ್ಕು ಸಾವಿರ ಘೋಷಣೆ ಮಾಡಿದ್ದಾರೆ. ರೈತರ, ಕಾರ್ಮಿಕರ ಹಾಗೂ ಬಡವರ ಪರ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ ರೈತಪರ, ಕಾರ್ಮಿಕಪರ ಹೋರಾಟ ಮಾಡಿಕೊಂಡು ಬಂದ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗಿದ್ದು, ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಹೇಳಿದರು.

ವಿಜಯೋತ್ಸವದ ಸಂದರ್ಭ ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ವಿ.ಕೆ. ಲೋಕೇಶ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಯಮುನಾ ಚಂಗಪ್ಪ, ನಗರಸಭಾ ಮಾಜಿ ಸದಸ್ಯರಾದ ಅನಿತಾ ಪೂವಯ್ಯ, ಉಣ್ಣಿಕೃಷ್ಣ, ಕೆ.ಎಸ್. ರಮೇಶ್ ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮತ್ತಿತರರು ಹಾಜರಿದ್ದರು.

ನಾಪೆÇೀಕ್ಲು: ನಾಪೆÇೀಕ್ಲು ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ನಾಪೆÇೀಕ್ಲು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಮುಖಂಡರಾದ ಪಾಡಿಯಮ್ಮಂಡ ಮನು ಮಹೇಶ್, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಸಂಪತ್ ದೇವಯ್ಯ, ಚೋಕಿರ ಸಜಿತ್, ಬಿ.ಎಂ.ಪ್ರತೀಪ್, ಕುಟ್ಟಂಜೆಟ್ಟಿರ ಪೂಣಚ್ಚ, ಮತ್ತಿತರರು ಇದ್ದರು.

ಕೂಡಿಗೆ : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಅಂಗವಾಗಿ ಕೂಡಿಗೆಯಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭ ತಾಲೂಕು ಬಿ.ಜೆ.ಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ಪ್ರಧಾನ ಕಾರ್ಯದರ್ಶಿ ಕೆ.ವರದ, ಆರ್.ಎಂ.ಸಿ ಮಾಜಿ ಅಧ್ಯಕ್ಷ ಎಂ, ಬಿ. ಜಯಂತ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್ ಮಂಜಳಾ, ತಾಲ್ಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡಿಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಚಂದ್ರ ಮೂಡ್ಲಿಗೌಡ, ಕುಮಾರಸ್ವಾಮಿ, ಸಾವಿತ್ರಿರಾಜು, ಜ್ಯೋತಿ ಪ್ರಮೀಳಾ, ಮಂಜುನಾಥ, ಚಿಣ್ಣಪ್ಪ, ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಸುಂಟಿಕೊಪ್ಪ: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು 4ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರಿಂದ ಬಿಜೆಪಿ ಸ್ಥಾನೀಯ ಸಮಿತಿಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕನ್ನಡ ವೃತ್ತದಲ್ಲಿ ಶುಕ್ರವಾರ ಸಂಜೆ ಪಕ್ಷ ಮತ್ತು ರಾಷ್ಟ್ರೀಯ, ರಾಜ್ಯ ನಾಯಕರಿಗೆ ಘೋಷಣೆ,ಜಯಕಾರ ಕೂಗುತ್ತಾ ಅಭಿನಂದಿಸಿಕೊಂಡರು.

ಬಿಜೆಪಿ ನಗರಾಧ್ಯಕ್ಷ ಪಿ.ಆರ್. ಸುನಿಲ್‍ಕುಮಾರ್, ಕಾರ್ಯದರ್ಶಿ ಬಿ.ಕೆ. ಪ್ರಶಾಂತ್ ಕುಮಾರ್, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ.ಸದಸ್ಯ ಸಿ.ಚಂದ್ರ, ಯುವ ಮೋರ್ಚಾ ಅಧ್ಯಕ್ಷ ರಂಜಿತ್ ಪೂಜಾರಿ, ಮಹಿಳಾ ಸಮಾಜದ ಅಧ್ಯಕ್ಷ ಲೀಲಾವತಿ ಮೇದಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ ಕೆದಕಲ್ ಗ್ರಾ.ಪಂ. ಮಾಜಿ ಅಧ್ಯಕ್ಷ ಸೋಮಯ್ಯ ಹಾಗೂ ಕಾರ್ಯಕರ್ತರು ಇದ್ದರು.

ಗೋಣಿಕೊಪ್ಪ ವರದಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸ ಮತ ಗಳಿಸುವಲ್ಲಿ ಪಡೆದ ಯಶಸ್ವಿಗೆ ಬಿಜೆಪಿ ಕಾರ್ಯಕರ್ತರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬಸ್ ನಿಲ್ದಾಣದ ಎದುರು ಜಮಾಯಿಸಿದ ಕಾರ್ಯಕರ್ತರು ಸಿಹಿ ಹಂಚಿ ಸಂತೋಷ ಹಂಚಿಕೊಂಡರು. ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ಬಿಜೆಪಿ ಕಾರ್ಯಕರ್ತರಾದ ರಾಜೇಶ್, ಮಂಜು, ಜಪ್ಪು ಸುಬ್ಬಯ್ಯ ಪಾಲ್ಗೊಂಡಿದ್ದರು.