ಸುಂಟಿಕೊಪ್ಪ, ಜು.28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘ ಬಡ ಮಹಿಳೆಯರ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸುಂಟಿಕೊಪ್ಪದ ಎಎಸ್‍ಐ ಶಿವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮ ವಾರಪೇಟೆ ತಾಲೂಕು ಸುಂಟಿಕೊಪ್ಪ ವಲಯದ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಕೊಡಗರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು 6 ತಂಡಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಜಾತಿ, ಮತ ಭೇದವಿಲ್ಲದೆ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ತರಬೇತಿ ನೀಡುತ್ತಾ ಸ್ವಸಹಾಯ ಸಂಘದ ಮೂಲಕ ಆರ್ಥಿಕ ಚೇತನರಿಗೆ ಸಹಕಾರಿ ನೀಡುತ್ತಿದೆ. ಆಧ್ಯಾತ್ಮಿಕ ನೆಮ್ಮದಿಯನ್ನು ಕಲ್ಪಿಸುತ್ತಿವೆ. ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವು ನೀಡುತ್ತಿದೆ ಎಂದು ಹೇಳಿದರು.

ಯೋಜನಾಧಿಕಾರಿ ವೈ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯಾಜನೆ ಕಳೆದ 38 ವರ್ಷಗಳಿಂದ ಸ್ವಸಹಾಯ ಸಂಘದಿಂದ ಮಹಿಳೆಯರ ಬದುಕು ಕಟ್ಟಲು ಶ್ರಮಿಸುತ್ತಿದೆ. ಆರ್ಥಿಕವಾಗಿ ಸಂಘಟನೆ ತರಬೇತಿಯಿಂದ ಮಹಿಳೆಯರು ಮುಂದೆ ಬರಲು ಕಾರಣವಾಗಿದೆ ಸೋಮವಾರಪೇಟೆ ತಾಲೂಕಿನಲ್ಲಿ 21,000 ಸ್ವಸಹಾಯ ಸಂಘದ ಸದಸ್ಯರುಗಳಿಸಿದ್ದಾರೆ. ಕೊಡಗರಹÀಳ್ಳಿ ತಂಡ ಎ.ಗ್ರೇಡ್ ಪಡೆದುಕೊಂಡಿದೆ ಎಂದು ಹೇಳಿದರು.

ಮಹಿಳಾ ಆರೋಗ್ಯ ಸಬಲೀ ಕರಣದ ವಿಚಾರಗೋಷ್ಠಿಯಲ್ಲಿ ಆರೋಗ್ಯ ಕಾರ್ಯಕರ್ತೆ ಪ್ರಮೀಳಾ ಮಾತನಾಡಿ, ಹೆಣ್ಣು ಮಕ್ಕಳು ಪುರುಷರಷ್ಟೇ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಗಮನಾರ್ಹ ಸಾಧನೆ ಗೈದಿದ್ದಾರೆ. ಹದಿಹರೆಯದೆ ಹೆಣ್ಣು ಮಕ್ಕಳು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಲು, ಮಧ್ಯಾಹ್ನ ಭೋಜನ ನೀಡುತ್ತಿರುª Àದರಿಂದ ಮಕ್ಕಳಿಗೆ ಪ್ರಯೋಜನವಾಗಿದೆ ಎಂದರು.

ಕೊಡಗರಹಳ್ಳಿ ಗ್ರಾ.ಪಂ.ಅಧ್ಯಕ್ಷ ಹೆಚ್.ಇ.ಅಬ್ಬಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಎಸ್.ಆರ್. ಕೃಷ್ಣಭಟ್ ಮಾತನಾಡಿದರು. ಮಹಿಳೆಯರಿಗೆ ಮಹಿಳಾ ಆರೋಗ್ಯ ಸಬಲೀಕರಣ ವಿಚಾರಗೋಷ್ಠಿ ಪ್ರಮೀಳಾ ಆರೋಗ್ಯ ಕಾರ್ಯಕರ್ತೆ, ಚಂದ್ರೇಶ್ ಕಿರಿಯ ಪುರುಷ ಆರೋಗ್ಯ ಸಹಾಯಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹೇಮಲತಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಪ್ರೇಮ ಇದ್ದರು.