ಮಡಿಕೇರಿ, ಜು. 28: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿ ರುವ ವಿದ್ಯಾರ್ಥಿ ನಿಲಯಗಳಲ್ಲಿ ವಾರ್ಡನ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನಿವೃತ್ತ ಹಾಸ್ಟೆಲ್ ವಾರ್ಡನ್, ನಿವೃತ್ತ ಶಾಲಾ ಶಿಕ್ಷಕರು ಹಾಗೂ ಕಚೇರಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿ ರುವ ವಿದ್ಯಾರ್ಥಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನಿಲಯ ಮೇಲ್ವಿಚಾರಕರ ಕೆಲಸ ಕಾರ್ಯ ನಿರ್ವಹಿಸಲು ಇಚ್ಚಿಸುವ ನಿವೃತ್ತ ನೌಕರರು ಅರ್ಜಿಯನ್ನು ದಾಖಲಾತಿಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಇವರಿಗೆ ಆಗಸ್ಟ್, 5ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115. ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.