ಸೋಮವಾರಪೇಟೆ, ಜು.28: ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ..ಎ ಮತ್ತು ಬಿ.ಕಾಂ. ವಿದ್ಯಾಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ್ ಮಾತನಾಡಿ, ಶಿಕ್ಷಣ ಜೀವನದ ಪ್ರಮುಖ ಅಂಗವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಸಂಯಮದಿಂದ ವರ್ತಿಸಿ ಉತ್ತಮ ವ್ಯಾಸಂಗ ಮಾಡಬೇಕು ಎಂದರು.
ಸಹಾಯಕ ಪ್ರಾಧ್ಯಾಪಕ ಎಂ.ಎಸ್. ಶಿವಮೂರ್ತಿ, ಉಪನ್ಯಾ¸ Àಕರುಗಳಾದ ಬಿ.ಎಂ. ಪ್ರವೀಣ್, ಎಂ.ಎಸ್. ಸುನೀಲ್ ಉಪಸ್ಥಿತರಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆದವು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ದ್ವಿತೀಯ ಹಾಗೂ ತೃತೀಯ ಬಿ.ಎ ಹಾಗೂ ಬಿ.ಕಾಂ. ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.