ಮೂರ್ನಾಡು: ಮೂರ್ನಾಡು ಪದವಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸದ ಆಚರಣೆಯನ್ನು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು.
ಕಾರ್ಗಿಲ್ ವಿಜಯಕ್ಕೆ ಕಾರಣರಾದ ಹುತಾತ್ಮ ಯೋಧರನ್ನು ನೆನೆಸಿ ಒಂದು ನಿಮಿಷದ ಮೌನಾಚರಣೆಯನ್ನು ಮಾಡಲಾಯಿತು. ದಿನದ ಮಹತ್ವವನ್ನು ಉಪನ್ಯಾಸಕ ನಾಟೋಳಂಡ ನವೀನ್ ವಿವರಿಸಿದರು. ವೀರ ಯೋಧರ ಭಾವಚಿತ್ರಕ್ಕೆ ಪುಷ್ಪವನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗ ಹಾಕುವ ಮೂಲಕ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಉಪಸ್ಥಿತರಿದ್ದರು.ಮಡಿಕೇರಿ: ನಗರಸಭೆಯ ಹಿಂದೂಸ್ತಾನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವೀರ ಯೋಧರನ್ನು ಸ್ಮರಿಸಿದರು.
ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಸೈನಿಕರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷ ಕೆ.ಜಿ. ಪೀಟರ್, ಉಪಾಧ್ಯಕ್ಷ ವಾಜಿದ್ ಬೇಗ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಷರೀಫ್, ಸಹ ಕಾರ್ಯದರ್ಶಿ ವಿನು, ಸಮಿತಿ ಸದಸ್ಯರುಗಳಾದ ಉಮ್ಮರ್, ಎಸ್.ಎಂ. ಷರೀಫ್, ರವಿಗೌಡ, ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.ಮುಳ್ಳೂರು: ಶನಿವಾರಸಂತೆ ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರಿನಲ್ಲಿ ಕಾರ್ಗಿಲ್ ವಿಜಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ದೇಶಕ್ಕಾಗಿ ತ್ಯಾಗ ಮತ್ತು ಬಲಿದಾನ ಮನೋಭಾವದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳಿಗೆ ದೇಶ ಕಾಯುವ ಯೋಧರ ಬಗ್ಗೆ ಮತ್ತು ಕಾರ್ಗಿಲ್ ಯುದ್ಧದ ಸಂದರ್ಭ ಸೈನಿಕರು ಗೆಲುವಿನ ಪತಾಕೆ ಹಾರಿಸಿದ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭ ದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿದ ಹುತಾತ್ಮ ಯೋಧರಿಗೆ ಪುಷ್ಪಗುಚ್ಛ ಸಲ್ಲಿಸಿ ನಮನವನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಆಕಾಶವಾಣಿಯ ಕಾರ್ಯಕ್ರಮ ಸಂಯೋಜಕ ದಿಗ್ವಿಜಯ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ದೇಶಪ್ರೇಮ ಮತ್ತು ದೇಶಕ್ಕಾಗಿ ದುಡಿಯುವ ಸಂಕಲ್ಪ ಹೊಂದುವಂತೆ ಕರೆ ನೀಡಿದರು ಮುಖ್ಯ ಶಿಕ್ಷಕ ಮಂಜುನಾಥ್, ಶಿಕ್ಷಕ ಸತೀಶ ಮತ್ತು ಪೋಷಕರು ಪಾಲ್ಗೊಂಡಿದ್ದರು.ಕುಶಾಲನಗರ: ಕಾರ್ಗಿಲ್ ವಿಜಯ್ ದಿವಸ್ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಕುಶಾಲನಗರ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ನಡೆಯಿತು.
ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಸೇರಿದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಜಯಘೋಷ ಹಾಕಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿದರು. ಈ ಸಂದರ್ಭ ಪಕ್ಷದ ನಗರಾಧ್ಯಕ್ಷ ಕೆ.ಜಿ. ಮನು, ಉಪಾಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಪ.ಪಂ. ಸದಸ್ಯರಾದ ಡಿ.ಕೆ. ತಿಮ್ಮಪ್ಪ, ರೇಣುಕಾ, ಅಮೃತ್ರಾಜ್, ಶೈಲಾ ಕೃಷ್ಣಪ್ಪ, ತಾಲೂಕು ಯುವ ಮೋರ್ಚಾ ಕಾರ್ಯಾಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಪ್ರಮುಖರಾದ ಜಿ.ಎಲ್. ನಾಗರಾಜ್, ಎಂ.ಎನ್. ಕುಮಾರಪ್ಪ, ಶಿವಾಜಿರಾವ್, ಎಂ.ವಿ. ನಾರಾಯಣ, ವಿ.ಡಿ. ಪುಂಡರೀಕಾಕ್ಷ, ಪಿ.ಪಿ. ಸತ್ಯನಾರಾಯಣ ಮತ್ತಿತರರು ಇದ್ದರು.