ಮಡಿಕೇರಿ, ಜು. 31: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಚೌರೀರ ಜಗತ್ ತಿಮ್ಮಯ್ಯ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಪ್ರಾಂಶುಪಾಲರಾಗಿದ್ದ ಡಾ. ಟಿ.ಡಿ. ತಿಮ್ಮಯ್ಯ ಅವರ ಅಧಿಕಾರಾವಧಿ ಜುಲೈ 31ಕ್ಕೆ ಕೊನೆಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಆದೇಶದ ಮೇರೆಗೆ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಚೌರೀರ ಜಗತ್ ತಿಮ್ಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಿವೃತ್ತ ಪ್ರಾಂಶುಪಾಲರಾದ ಡಾ. ಟಿ.ಡಿ. ತಿಮ್ಮಯ್ಯನವರು, ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಪಿಹೆಚ್ಡಿ ಮಾರ್ಗದರ್ಶಕರಾಗಿ ಮುಂದುವರೆಯಲಿದ್ದಾರೆ.