ಮಡಿಕೇರಿ, ಜು. 31: ಶ್ರೀಮಂಗಲ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಬಿರುನಾಣಿ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವದರಿಂದ ತಾ.1 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಕೆ.ಕೆ.ಆರ್, ಟೀ ಎಸ್ಟೇಟ್, ಬಿರುನಾಣಿ, ಬಾಡಗರ ಕೇರಿ, ತೆರಾಲು, ಪರಕಟಗೇರಿ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ತಿಳಿಸಿದ್ದಾರೆ.