ಮಡಿಕೇರಿ, ಜು. 31: ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದ ಪ್ರಗತಿ ಪರ ರೈತರಾದ ಚೋಂಡಿರ ಸುರೇಶ್ ಬಿನ್ ಅಪ್ಪಯ್ಯ, ಇವರ ಭತ್ತದ ಗದ್ದೆಯಲ್ಲಿ ನಾಟಿ ಯಂತ್ರದ ಮೂಲಕ ಭತ್ತ ನಾಟಿ ಮಾಡುವ ಪ್ರಾತ್ಯಕ್ಷಿಕೆಯು ತಾ.2 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸುತ್ತಮುತ್ತಲಿನ ಆಸಕ್ತ ರೈತ ಭಾಂದವರು ಆಗಮಿಸಿ ಪ್ರಾತ್ಯಕ್ಷಿಕೆ ವೀಕ್ಷಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.