ಕೂಡಿಗೆ, ಜು. 31: ಭಾರತೀಯ ಜನತಾ ಪಕ್ಷದ ಕೂಡುಮಂಗಳೂರು ಸ್ಥಾನೀಯ ಸಮಿತಿ ವತಿಯಿಂದ ಪ್ರಾಥಮಿಕ ಸದಸ್ಯತ್ವ ಅಭಿಯಾನದ ಅಂಗವಾಗಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಭಿಯಾನದ ವಿಸ್ತಾರಕ ಮೊಣ್ಣಪ್ಪ ಮಾತನಾಡಿದರು. ಈ ಸಂದರ್ಭ ತಾ.ಪಂ. ಸದಸ್ಯ ಗಣೇಶ್, ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಜಿ. ಮಂಜುನಾಥ್, ಎಸ್.ಸಿ. ಘಟಕದ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಎಸ್.ಟಿ. ಘಟಕದ ಅಧ್ಯಕ್ಷ ಪ್ರಭಾಕರ್, ಸ್ಥಾನೀಯ ಸಮಿತಿ ಉಪಾಧ್ಯಕ್ಷ ವೈ.ಸಿ. ಕೃಷ್ಣ, ಯುವ ಮೋರ್ಚಾ ಉಪಾಧ್ಯಕ್ಷ ಚಂದ್ರು ಮೂಡ್ಲಿಗೌಡ, ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ ಸಾವಿತ್ರಿ, ಕೂಡಿಗೆ ಗ್ರಾ.ಪಂ. ಸದಸ್ಯೆ ಕಲ್ಪನಾ, ಕನಕ ಸೇರಿದಂತೆ ಕಾರ್ಯಕರ್ತರು ಇದ್ದರು.