ಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಗಾಯತ್ರಿ ಹೋಮ ಯಜ್ಞವು ನಡೆಯಿತು.

ಪೂಜಾ ವಿಧಿ-ವಿಧಾನಗಳನ್ನು ಕೇರಳದ ಸಜಿಪಣಿಕರ್ ಹಾಗೂ ಮಿಧನ್ ನೆರವೇರಿಸಿದರು. ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.