ಹೆಬ್ಬಾಲೆ, ಜು. 31: ಇಲ್ಲಿನ ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಆ. 2 ರಂದು ವಾಣಿಜ್ಯಶಾಸ್ತ್ರ ವಿಭಾಗ, ಕಂಪ್ಯೂಟರ್ ಕೊಠಡಿ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮಡಿಕೇರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ವಾಣಿಜ್ಯಶಾಸ್ತ್ರ ವಿಭಾಗವನ್ನು ಹಾಗೂ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಲಿದ್ದು, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಆರ್. ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್. ಜಯಣ್ಣ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರುಗಳು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎನ್.ಎಸ್. ಧರ್ಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.