ಶನಿವಾರಸಂತೆ: ನಿವೃತ್ತ ಸೈನಿಕರ ಸಂಘ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಳಿಗ್ಗೆ ಸಂಘದ ಕಚೇರಿಯಿಂದ ನಿವೃತ್ತ ಸೈನಿಕರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾರತ ಮಾತೆಗೆ ಜೈಘೋಷ ಕೂಗುತ್ತಾ ಮೆರವಣಿಗೆ ನಡೆಸಿದರು. ಬೈಪಾಸ್ ರಸ್ತೆ, ಸಹಕಾರ ಬ್ಯಾಂಕ್ ಮಾರ್ಗವಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿ ಸಾಗಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡರು.
ಹುತಾತ್ಮ ವೀರ ಸೈನಿಕರ ಸಂಕೇತವಾಗಿ ಬಂದೂಕು ಮತ್ತು ಶಿರಸ್ತ್ರಾಣ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಂಘದ ಅಧ್ಯಕ್ಷ ಎಂ.ಎನ್. ಧರ್ಮಪ್ಪ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡು ಹುತಾತ್ಮರಾದ ವೀರ ಸೈನಿಕರ ಗುಣಗಾನ ಮಾಡಿದರು.
ನಂತರ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಧರ್ಮಪ್ಪ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ನಿವೃತ್ತ ಸೈನಿಕ ಕೆ.ವಿ. ಮಂಜುನಾಥ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಹುತಾತ್ಮರಾದ ಯೋಧರ ಯಶೋಗಾಥೆ ಇಂದಿನ ವಿದ್ಯಾರ್ಥಿಗಳಿಗೆ, ಯುವ ಜನಾಂಗಕ್ಕೆ ಸ್ಫೂರ್ತಿಯಾಗಬೇಕು ಎಂದರು.
ಶನಿವಾರಸಂತೆ - ದುಂಡಳ್ಳಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಾದ ಎಂ.ಹೆಚ್. ಮಹಮ್ಮದ್ ಗೌಸ್, ಸಿ.ಜೆ. ಗಿರೀಶ್, ಮಾಜಿ ಅಧ್ಯಕ್ಷೆ ಭುವನೇಶ್ವರಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಉಪನ್ಯಾಸಕ ಹರೀಶ್‍ಕುಮಾರ್, ಶಿಕ್ಷಕ ಕೆ.ಪಿ. ಜಯಕುಮಾರ್, ಮುಖಂಡರಾದ ಬಿ.ಎಸ್. ಪ್ರತಾಪ್, ದಿವಾಕರ್, ಶುಕ್ಲಾಂಬರ, ಬಸವರಾಜ್, ಬೆಳ್ಳಿ, ಸೈನಿಕರ ಸಂಘದ ಕಾರ್ಯದರ್ಶಿ ಎಸ್.ಎನ್. ಪಾಂಡು, ಸದಸ್ಯರು, ಶಾಲಾ-ಕಾಲೇಜು ಮುಖ್ಯಸ್ಥರು ಉಪಸ್ಥಿತರಿದ್ದರು.ಸಿದ್ದಾಪುರ: ನೆಲ್ಲಿಹುದಿಕೇರಿ ಶ್ರೀ ಮುತ್ತಪ್ಪ ಯುವ ಕಲಾ ಸಂಘ ಹಾಗೂ ಯುವ ಬ್ರಿಗೇಡ್ ಸಂಘಟನೆಯ ವತಿಯಿಂದ 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ನಗರದಲ್ಲಿ ಜಯಘೋಷ ಕೂಗುವ ಮೂಲಕ ಆಚರಿಸಲಾಯಿತು.
ಈ ಸಂದರ್ಭ ಸಂಘಟನೆಯ ಪ್ರಮುಖರಾದ ಪದ್ಮನಾಭ್, ಸುರೇಶ್, ಜಯ, ಅಪ್ಪು, ಬೆಳ್ಳಿಯಪ್ಪ, ಅನೀಶ್ ಇನ್ನಿತರರು ಹಾಜರಿದ್ದರು.