ಮಡಿಕೇರಿ, ಜು. 31: ಕುಟ್ಟ ಕೊಡವ ಸಮಾಜದ ವತಿಯಿಂದ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ “ಕಕ್ಕಡ 18 ನಮ್ಮೆ” ಈ ಬಾರಿ ಆ. 4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕುಟ್ಟ ಕೊಡವ ಸಮಾಜದಲ್ಲಿ ನಡೆಯುವ ಕಾರ್ಯಕ್ರಮವನ್ನು ಡಾ. ಸೋನಿಯಾ ಮಂದಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕೊಡವ ಸಮಾಜಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವ ತಿಂಡಿ, ತಿನಿಸು, ಬಟ್ಟೆ, ಮನೆ ಸಾಮಗ್ರಿಗಳು ಹಾಗೂ ವಾಹನ ಪ್ರದರ್ಶನ ಮತ್ತು ಮಾರಾಟವಿರುತ್ತದೆ ಎಂದು ಕುಟ್ಟ ಕೊಡವ ಸಮಾಜದ ಆಡಳಿತ ಮಂಡಳಿ ತಿಳಿಸಿದೆ.