ಮಡಿಕೇರಿ, ಆ. 1: ರಾಜ್ಯ ಮೀಸಲು ಪೊಲೀಸ್ ವಿಭಾಗದಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಲ್ಮಾಚಂಡ ಪಳಂಗಪ್ಪ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ.

1983-84ರಲ್ಲಿ ದೆಹಲಿಯಲ್ಲಿ ನಡೆದಿದ್ದ ಸಾರ್ಕ್ ಶೃಂಗ ಸಭೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ್ದ ಶ್ರೀಯುತರು, ರಾಜ್ಯ ಗುಪ್ತಚರ ಇಲಾಖೆಯಲ್ಲೂ 22 ವರ್ಷ ಸೇವೆ ಸಲ್ಲಿಸಿದ್ದಾರೆ. ಮಾಜೀ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಆರೋಪಿಗಳಾದ ಶಿವರಸನ್ ಹಾಗೂ ಶೋಭಾ ಇವರುಗಳನ್ನು ಬಂಧಿಸಲು ರಚಿಸಿದ್ದ ತಂಡದಲ್ಲೂ ಪಾಲ್ಗೊಂಡಿದ್ದರು.