ಮಡಿಕೇರಿ, ಆ. 1: ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ತಾ. 3 ರಂದು ಬೆಳಿಗ್ಗೆ 9.30 ಗಂಟೆಗೆ ವಿಜ್ಞಾನ ಪಾರ್ಕ್ ಮತ್ತು ಚಿಗುರು ಎಂಬ ಪ್ರಾಥಮಿಕ ಶಾಲಾ ಕಟ್ಟಡದ ಉದ್ಘಾಟನೆ ಜರುಗಲಿದೆ.
ಕೊಡಗು ಜಿಲ್ಲಾ ಶಿಕ್ಷಣಾಧಿಕಾರಿ ಪಿ.ಎಸ್. ಮಚ್ಚಾಡೋ ಮತ್ತು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿ.ಕೆ. ಸುಬ್ಬಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.