ಮಡಿಕೇರಿ, ಆ.1: ಮೂರ್ನಾಡು ವಿದ್ಯಾಸಂಸ್ಥೆ ಮತ್ತು ಮೂರ್ನಾಡು ಜಾನಪದ ಪರಿಷತ್ ಹೋಬಳಿ ಘಟಕದ ವತಿಯಿಂದ ತಾ. 3 ರಂದು ಕಕ್ಕಡ -18 ಕಾರ್ಯಕ್ರಮ ಆಯೋಜಿಸಲಾಗಿದೆ.

ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ 12.30 ಗಂಟೆಗೆ ಕಕ್ಕಡ ವಿಶೇಷ ಖಾದ್ಯಗಳ ಪ್ರದರ್ಶನವಿರುತ್ತದೆ. ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟೀರ ಮಾದಪ್ಪ, ಕಾರ್ಯದರ್ಶಿ ವೇಣು ಅಪ್ಪಣ್ಣ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಚಂದ್ರಮೋಹನ್, ಮೂರ್ನಾಡು ಹೋಬಳಿ ಘಟಕದ ಗೌರವಾಧ್ಯಕ್ಷ ಕಿಗ್ಗಾಲು ಗಿರೀಶ್ , ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಜಾನಪದ ಪರಿಷತ್‍ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ.