ಮಡಿಕೇರಿ, ಆ.1: ಪ್ರಸಕ್ತ (2019-20) ಸಾಲಿಗೆ ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅವಿವಾಹಿತ ಅರ್ಹ ಪುರುಷ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 08 ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡುವದು. ಹಾಗೂ ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಹಾಗೂ ದೂ.ಸಂ.08272-225628ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.