ಮಡಿಕೇರಿ, ಆ. 2: ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ 2019ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ತಾ. 3 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎಂ. ಭವಾನಿ, ಕಾರ್ಯದರ್ಶಿ ಸಿ.ಎಂ. ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ. ಪುರುಷೋತ್ತಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ, ಪ್ರಾಂಶುಪಾಲ ಪಿ.ಆರ್.ವಿಜಯ್ ಇತರರು ಪಾಲ್ಗೊಳ್ಳಲಿದ್ದಾರೆ.