ಮಡಿಕೇರಿ, ಆ. 2: ಸಿದ್ದಾಪುರದ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್‍ನ ಸಿದ್ದಾಪುರ ಸಂಯುಕ್ತ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ತಾ. 3ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಆದಿಚುಂಚನಗಿರಿ ಮೈಸೂರು - ಕೊಡಗು ಶಾಖೆಯ ಸೋಮೇಶ್ವರನಾಥ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಧಾಕರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಠಾಣಾಧಿಕಾರಿ ಎ.ವಿ. ದಯಾನಂದ, ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್, ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ಜಮೀರ್ ಅಹ್ಮದ್, ಮಾಲ್ದಾರೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವರಾಂ, ಪಿರಿಯಾಪಟ್ಟಣ ಬಿ.ಜಿ.ಎಸ್. ಕಾಲೇಜಿನ ಪ್ರಾಂಶುಪಾಲ ಗೋವಿಂದೇ ಗೌಡ, ಸಿದ್ದಾಪುರ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಾಬು ನಾಯಕ್, ಅಮ್ಮತ್ತಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸದಾನಂದ ಉಪಸ್ಥಿತರಿರುವರು.