ಮಡಿಕೇರಿ, ಆ. 2: ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಲತಾಕುಮಾರಿ ಅಧ್ಯಕ್ಷತೆಯಲ್ಲಿ ಪಶು ವ್ಯೆಧ್ಯಾಧಿಕಾರಿ ಡಾ. ಚಂದ್ರಶೇಖರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್. ಪ್ರಥ್ಯು ಅವರ ಸಮ್ಮುಖದಲ್ಲಿ ಗ್ರಾಮ ಸಭೆ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಜರುಗಿತು.
ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ತಮ್ಮ ಪರಿಚಯದೊಂದಿಗೆ ಇಲಾಖೆಯ ಸೌಲಭ್ಯ ಮತ್ತು ಸಾರ್ವಜನಿಕರ ಕುಂದು ಕೊರತೆಗಳಾದ ವಿದ್ಯುತ್ ಸಮಸ್ಯೆ, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಸೌಲಭ್ಯ, ಪ್ರಧಾನ ಮಂತ್ರಿ ಕೃಷಿ ಸನ್ಮಾನ್ ಯೋಜನೆ ಪಲಾನುಭವಿಗಳ ನೋಂದಣಿ ಪ್ರಕ್ರಿಯೆ, ಕಳೆದ ಸಾಲಿನ ಮಳೆಯಿಂದಾದ ಬೆಳೆ ಹಾನಿ ಪರಿಹಾರ ದೊರಕಿರುವ ಬಗ್ಗೆ, ಕೃಷಿ ಬೆಳೆಗಳಿಗೆ ದೊರೆಯುವ ಸಲಕರಣೆ, ರಸಗೊಬ್ಬರ ಇತ್ಯಾದಿ ಬಗ್ಗೆ ಚರ್ಚೆ ಮಾಡಲಾಯಿತು. 2019-20ನೇ ಸಾಲಿನ ಮಾರುಕಟ್ಟೆ ಪ್ರಕ್ರಿಯೆ ವಿಳಂಬದ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರು. ಹಂದಿಮಾಂಸ ಮಳಿಗೆ ಲೈಸನ್ಸ್ ವಿತರಣೆ ಮಾಡಬೇಕೆಂದು ಸಾರ್ವಜನಿಕರು ತಿಳಿಸಿದರು. ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗ್ರೀನ್ ಡಾಟ್ ಸಂಸ್ಥೆಗೆ ಷರತ್ತು ಬದ್ಧವಾಗಿ ಸರಕಾರ ನೀಡಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕಾನೂರು ಶಾಲಾ ಮಕ್ಕಳು ಪಾರ್ಥನೆಯನ್ನು ನೇರವೇರಿಸಿ ದರು. ತಾಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಎಸ್. ಸತೀಶ್ ಸ್ವಾಗತಿಸಿ, ವಂದಿಸಿದರು.