ಮಡಿಕೇರಿ, ಆ.1: ಪ್ರಸಕ್ತ (2019-20) ಸಾಲಿನಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ ಗ್ರಾಮ ಮಟ್ಟದಲ್ಲಿ ವಿವಿಧ ಬೆಳೆಗಳ ವಿಸ್ತೀರ್ಣದ ಅಂದಾಜು ಅಂಕಿ ಅಂಶಗಳ ಮಾಹಿತಿಯನ್ನು ಕ್ರೋಡೀಕರಣ ಮಾಡುವ ಸಲುವಾಗಿ ತಾತ್ಕಾಲಿಕ ಸ್ಥಳೀಯ ಯುವಕರ ಸೇವೆಯನ್ನು (ಖಾಸಗಿ ನಿವಾಸಿ) ಪಡೆಯುವ ಉದ್ದೇಶವಿದ್ದು, ಮಡಿಕೇರಿ ತಾಲ್ಲೂಕಿನ ಎಲ್ಲಾ ಹೋಬಳಿಗಳಿಗೆ ಸಂಬಂಧಿಸಿದ ಗ್ರಾಮಗಳಲ್ಲಿ ಸಮೀಕ್ಷೆ ಮಾಡಲು ಇಚ್ಛಿಸುವ ಸ್ಥಳೀಯ ವಿದ್ಯಾವಂತ ಯುವಕರು ತಾ.5ರೊಳಗೆ ಸಂಬಂಧಿಸಿದ ಹೋಬಳಿಯ ಕಂದಾಯ ಪರಿವೀಕ್ಷಕರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಆಯ್ಕೆಯಾದ ಸಮೀಕ್ಷಕರಿಗೆ ಗೌರವ ಧನ ಪಾವತಿಸಲಾಗುವದು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು/ ಕಂದಾಯ ಪರಿವೀಕ್ಷಕರನ್ನು ಸಂಪರ್ಕಿಸುವಂತೆ ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.