ಮಡಿಕೇರಿ, ಆ. 2: ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಶಕ್ತಿ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರ ಮಾತೃಶ್ರೀ ಕಮಲಾವತಿ (85) ತಾ. 2ರಂದು ಮಡಿಕೇರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ತಾ. 3ರಂದು (ಇಂದು) ಮಡಿಕೇರಿಯ ಬ್ರಾಹ್ಮಣರ ರುದ್ರಭೂಮಿಯಲ್ಲಿ ನಡೆಯಲಿದೆ.