ಸೋಮವಾರಪೇಟೆ, ಆ. 2: ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಲಯನ್ಸ್ ಕ್ಲಬ್‍ನ 2019-20ನೇ ಸಾಲಿನ ನೂತನ ಆಡಳಿತ ಮಂಡಳಿ ಪದಗ್ರಹಣ ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯ ಹಾಗೂ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ, ಲಯನ್ಸ್ ಅಧ್ಯಕ್ಷ ಮಣವಟ್ಟಿರ ಹರೀಶ್, ಮಾಜಿ ಅಧ್ಯಕ್ಷ ಎಸ್.ಎನ್. ಯೋಗೇಶ್ ಮತ್ತಿತರರು ಇದ್ದರು.