ಕುಶಾಲನಗರ, ಆ. 2: ಕುಶಾಲನಗರ ಸರಕಾರಿ ಇಂಜಿನಿಯ ರಿಂಗ್ ಕಾಲೇಜಿನ 2018-19ನೇ ಸಾಲಿನಲ್ಲಿ 3 ವಿಭಾಗಗಳಲ್ಲಿ ಶೇ. 100 ರಷ್ಟು ಫಲಿತಾಂಶ ಹೊರಬಿದ್ದಿದೆ. ಸಿವಿಲ್ ವಿಭಾಗದಲ್ಲಿ 60 ವಿದ್ಯಾರ್ಥಿಗಳು, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 61 ವಿದ್ಯಾರ್ಥಿಗಳು, ಎಲೆಕ್ಟ್ರಾನಿಕ್ ವಿಭಾಗದಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇ. 100 ಫಲಿತಾಂಶ ದೊರೆತರೆ ಮೆಕಾನಿಕಲ್ ವಿಭಾಗದಲ್ಲಿ 69 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿ ಗಳು ಅನುತ್ತೀರ್ಣಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವದಾಗಿ ಕಾಲೇಜು ಆಡಳಿತಾಧಿಕಾರಿ ಲಿಂಗರಾಜು ಮಾಹಿತಿ ನೀಡಿದ್ದಾರೆ.