ಮಡಿಕೇರಿ, ಆ. 2: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 8 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ ಸಾಂಸ್ಥಿಕ ಪ್ರಶಸ್ತಿ, ಒಟ್ಟು 9 ಪ್ರಶಸ್ತಿ ನೀಡಲಾಗುವದು. ಈ ಯಾವದಾದರೊಂದು ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಹಿರಿಯ ನಾಗರಿಕರು ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆ ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದುಕೊಂಡು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ, ಮಡಿಕೇರಿ-571201 ಇಲ್ಲಿಗೆ ಎಲ್ಲಾ ದಾಖಲಾತಿಗಳೊಂದಿಗೆ (ಲಗತ್ತಿಸುವ ದಾಖಲೆಗಳಿದ್ದಲ್ಲಿ ವಿವರಗಳನ್ನು ಸಂಕ್ಷಿಪ್ತವಾಗಿ ಅರ್ಜಿಯಲ್ಲಿ ವಿವರಿಸಬೇಕು) ತಾ.9 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಹಾಯವಾಣಿ ಸಂಖ್ಯೆ:08272 222830 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಶೇಷಚೇತನ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.