ನಾಪೋಕ್ಲು, ಆ. 3: ನಾಪೋಕ್ಲು - ಭಾಗಮಂಡಲ ಮುಖ್ಯರಸ್ತೆಯ ಎಮ್ಮೆಮಾಡು ಜಂಕ್ಷನ್ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಯಿತು. ವಿದ್ಯುತ್ ತಂತಿಗಳ ಮೇಲೆ ಮರಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಸುಮಾರು ಅರ್ಧ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ಮುರಿದುಬಿದ್ದ ಮರವನ್ನು ಕಡಿದು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.