ಮಡಿಕೇರಿ, ಆ. 3: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಿರುವ ಕೊಡಗು ವಲಯ ಮಟ್ಟದ ಅಂತರ ಕಾಲೇಜು ಸಾಂಪ್ರದಾಯಿಕ ಕ್ರೀಡಾಕೂಟ ಕಾಕೋಟುಪರಂಬು ಮುಲ್ಲೇರ ಮಧುರವರ ಗದ್ದೆಯಲ್ಲಿ ತಾ. 5 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಶಾಸಕ ಕೆ.ಜಿ. ಬೋಪಯ್ಯ, ಕಾಕೋಟುಪರಂಬು ಕಾಫಿ ಬೆಳೆಗಾರ ಮುಲ್ಲೇರ ಮಧು ಮಂಜುನಾಥ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.