ಕೂಡಿಗೆ, ಆ. 3: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿದ್ದು, ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿದ ಕುಮಾರಸ್ವಾಮಿ ಅವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬೀಳ್ಕೊಡಲಾಯಿತು.

ಇವರು ಕಡಗಾದಾಳು ಗ್ರಾಮ ಪಂಚಾಯಿತಿಗೆ ಮುಂಬಡ್ತಿ ಪಡೆದಿದ್ದಾರೆ. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ಭವ್ಯ, ಉಪಾಧ್ಯಕ್ಷ ಕೆ.ಎಸ್. ತಾರಾನಾಥ ಸೇರಿದಂತೆ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ರಾಜಶೇಖರ, ಸಿಬ್ಬಂದಿವರ್ಗ ಇದ್ದರು.