ಮಡಿಕೇರಿ, ಆ. 3: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ನಾಗಬನದಲ್ಲಿ ತಾ. 5 ರಂದು ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಬೆಳಿಗ್ಗೆ 6.30 ರಿಂದ 12 ರವರೆಗೆ ಶ್ರೀ ನಾಗದೇವರಿಗೆ ಎಳನೀರಭಿಷೇಕ, ಕ್ಷೀರಾಭಿಷೇಕ, ಪಂಚಾಮೃತಭಿಷೇಕ ನಡೆಯಲಿದೆ. 12 ರಿಂದ ಅಲಂಕಾರ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ.

ಕೂಡಿಗೆ: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನಾಗರಪಂಚಮಿ ಪೂಜಾ ಆಚರಣೆ ತಾ. 5 ರಂದು ನಡೆಯಲಿದೆ. ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಗೆ 1008 ಕಬ್ಬಿನ ಹಾಲಿನ ಅಭಿಷೇಕ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರಗೆ ವಿಶೇಷ ಪೂಜೆ, ಅಭಿಷೇಕಗಳು ನಡೆದು ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ ರಂಗಪೂಜೆ ಸೇರಿದಂತೆ ಅನೇಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.