ಮಡಿಕೇರಿ, ಆ. 3: ಜಿಲ್ಲೆಯಲ್ಲಿ ತಾ. 5 ರಿಂದ ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವದೇ ಸಮಸ್ಯೆಗಳಿಗೆ 24x7 ಕಂಟ್ರೋಲ್ ರೂಂ. 08272-221077, ವಾಟ್ಸ್‍ಅಪ್ ನಂ. 8550001077 ಸಂಪರ್ಕಿಸಬಹುದಾಗಿದೆ.