ಮಡಿಕೇರಿ, ಆ. 4: ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2019ನೇ ಶೈಕ್ಷಣಿಕ ಸಾಲಿನ ಬಾಕಿ ಉಳಿದಿರುವ ಸೀಟುಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 10 ಕೊನೆಯ ದಿನವಾಗಿದೆ. ಎಲೆಕ್ಟ್ರಾನಿಕ್ ಮೆಕ್ಯಾನಿಕ್ (2 ವರ್ಷ) ಎಸ್‍ಎಸ್ ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ), ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 14 ವರ್ಷಗಳು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಪೊನ್ನಂಪೇಟೆ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.