ಹೆಬ್ಬಾಲೆ, ಆ. 4: ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಧ್ಯಯನ ಮಾಡುವದರಿಂದ ಉದ್ಯೋಗ ಅವಕಾಶಗಳು ಹೆಚ್ಚಾಗಿ ದೊರೆಯಲಿದ್ದು, ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ಹೇಳಿದರು. ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನೂತನ ವಾಣಿಜ್ಯಶಾಸ್ತ್ರ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು. ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಕಂಪ್ಯೂಟರ್ ಕೊಠಡಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ಕಾಲೇಜಿನಲ್ಲಿ ಸಿಗುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡು ಚೆನ್ನಾಗಿ ಓದಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾಗುವ ಮೂಲಕ ತಮ್ಮ ಪೋಷಕರಿಗೆ, ಗುರುಗಳಿಗೆ ಹಾಗೂ ತಾವು ಓದಿದ ಶಾಲೆಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಆರ್. ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜಿ.ಪಂ. ಅನುದಾನದಲ್ಲಿ ಕಾಲೇಜಿಗೆ ಹೈಟೆಕ್ ಶೌಚಾಲಯವನ್ನು ನಿರ್ಮಿಸಿ ಕೊಡುವದಾಗಿ ಭರವಸೆ ನೀಡಿದರು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ನಾಗೇಂದ್ರ, ನಿರ್ದೇಶಕರಾದ ಹೆಚ್.ಹೆಚ್. ಸುಂದರ್, ಹೆಚ್.ಸಿ. ಹರೀಶ್, ಜವರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪರಮೇಶ್, ಕಾವೇರಿ ಗ್ರಾಮೀಣ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಸುಬ್ರಮಣ್ಯ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜು, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಹೆಚ್.ಎಸ್. ಗಣೇಶ್, ತೊರೆನೂರು ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ.ಆರ್. ಕುಮಾರ್, ಶಿರಂಗಾಲ ಪ್ರೌಢಶಾಲೆ ಮುಖ್ಯ ಶಿಕ್ಷಕ ಸೋಮಯ್ಯ, ದೊಡ್ಡಕಮರವಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ. ಮಲ್ಲೇಶ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ರಘು ಹೆಬ್ಬಾಲೆ, ಕಾಲೇಜಿನ ಪ್ರಾಂಶುಪಾಲ ಎನ್.ಎಸ್. ಧರ್ಮಪ್ಪ,ಆಡಳಿತ ಮಂಡಳಿ ನಿರ್ದೇಶಕರು, ಶಾಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಸ್ವಾಗತಿಸಿದರು. ಉಪನ್ಯಾಸಕ ವಿಜಯಕುಮಾರ್ ನಿರೂಪಿಸಿ, ಬಸವರಾಜು ವಂದಿಸಿದರು.