ಮಡಿಕೇರಿ, ಆ. 4: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರೊ.ಅಮಥ್ರ್ಯ ಸೇನ್ ವೇದಿಕೆ ವತಿಯಿಂದ 2019-20ರ ಕೇಂದ್ರ ಬಜೆಟ್ ವಿಶ್ಲೇಷಣಾ ಕಾರ್ಯಕ್ರಮ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಕೇವಲ ಎಲೆಕ್ಟ್ರಾನಿಕ್ ವಸ್ತುಗಳಲ್ಲಿ ಕಾಲ ಕಳೆಯುತ್ತಿರುವದನ್ನು ಕಾಣಬಹುದು. ಇದರಿಂದ ಚಿಂತನ ಲಹರಿಯು ಕ್ಷೀಣವಾಗಿದೆ. ವಿದ್ಯಾರ್ಥಿಗಳಲ್ಲಿ ಹೊಸ ಹೊಸ ವಿಷಯಗಳ ಕುರಿತು ಅರಿವು ಮೂಡಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನ ಭಂಡಾರ ಬೆಳಸುವಂತಹ ಕಾರ್ಯಕ್ರಮವಾಗಬೇಕಿದೆ ಎಂದು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಸಿ.ದಯಾನಂದ ಅವರು ನುಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಿತ್ರಾ ವೈ., ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಿ.ಡಿ.ಹರ್ಷ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಡಾ.ಕೆ.ಸಿ.ದಯಾನಂದ ಇತರರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕಾವ್ಯ ಪ್ರಾರ್ಥಿಸಿದರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕಿ ಶಾಲಿನಿ ಅವರು ಸ್ವಾಗತಿಸಿ, ವಂದಿಸಿದರು.