ಮಡಿಕೇರಿ, ಆ. 4: ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.

ಮಗು ಹೆಮ್ಮರವಾಗಿ ಬೆಳೆಯಲು ಶಿಸ್ತು, ಸಮಯಪಾಲನೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಶಿಸ್ತು ಪಾಲಿಸುವದರ ಮೂಲಕ ಉತ್ತಮ ಗುರಿ ಮುಟ್ಟಲು ಸಾಧ್ಯ. ಇದರಿಂದ ಮಕ್ಕಳು ತಮ್ಮ ಗುರಿಯತ್ತ ಚಿಂತನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಎಸ್.ಬಿ.ಐ. ಬ್ಯಾಂಕ್ ಅಧಿಕಾರಿ ದಿನೇಶ್ ಹಿತವಚನ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಧನಂಜಯ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಪ್ರಾಂಶುಪಾಲ ವಿಜಯ್, ರಾಜ್ಯಶಾಸ್ತ್ರದ ಉಪನ್ಯಾಸಕ ಚಿದಾನಂದ ಇತರರು ಇದ್ದರು.