ಸೋಮವಾರಪೇಟೆ, ಆ. 4: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡರೆ ಸಮಾಜದಲ್ಲಿ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಲು ಸಾಧ್ಯ ಎಂದು ಸಂತ ಜೋಸೆಫ್ ವಿದ್ಯಾಸಂಸ್ಥೆಯ ಸಂಚಾಲಕ ಫಾ. ರಾಯಪ್ಪ ಹೇಳಿದರು.
ಇಲ್ಲಿನ ಸಂತ ಜೋಸೆಫ್ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆ ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳೊಂದಿಗೆ ಸಮಾಜಸೇವೆಯಲ್ಲಿ ತೊಡಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.
ಸಂತ ಜೋಸೆಫ್ ಪದವಿ ಕಾಲೇಜಿನ ಪ್ರಾಂಶುಪಾಲ ಅಂತೋಣಿ ರಾಜ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಥಾಮಸ್, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾ ಧಿಕಾರಿ ಆನಂದ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.