ಮಡಿಕೇರಿ, ಆ. 4: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ತಾ. 7 ರಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೇಬಲ್ ಟೆನ್ನಿಸ್ ಪಂದ್ಯಾವಳಿಯು 14 ವರ್ಷಕ್ಕೆ ಒಳಪಟ್ಟ ಬಾಲಕ-ಬಾಲಕಿಯರಿಗೆ ಹಾಗೂ 18 ವರ್ಷ ಒಳಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗಾಗಿ ಸಿಂಗಲ್ಸ್ ಮತ್ತು ಡಬಲ್ಸ್ ಪಂದ್ಯಾವಳಿ ಆಯೋಜಿಸಲಾಗಿದೆ.
ಟೇಬಲ್ ಟೆನ್ನಿಸ್ ಆಟಗಾರರು ಟಿ.ಟಿ. ಬ್ಯಾಟ್ ಅನ್ನು ತಾವೇ ತರತಕ್ಕದ್ದು, ತಾ. 6 ರೊಳಗೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ 08272-228985 ನ್ನು ಸಂಪರ್ಕಿಸಬಹುದು.