ಕುಶಾಲನಗರ, ಆ. 4: ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯೊಂದಿಗೆ ಸ್ವಚ್ಛತೆ ಇಲ್ಲದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರಮುಖರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಆಸ್ಪತ್ರೆಯ ಪುರುಷರ ವಾರ್ಡ್‍ನಲ್ಲಿ ಶೌಚಾಲಯ ದುರಸ್ತಿಯಲ್ಲಿದ್ದು ರೋಗಿಗಳಿಗೆ ಅನಾನುಕೂಲ ಉಂಟಾಗುತ್ತಿದೆ ಎಂದು ವೇದಿಕೆಯ ನಗರಾಧ್ಯಕ್ಷ ಬಿ.ಜೆ. ಅಣ್ಣಯ್ಯ ದೂರಿದ್ದಾರೆ.

ತಕ್ಷಣ ಸರಿಪಡಿಸದಿದ್ದಲ್ಲಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಾ. ಮಧುಸೂದನ್ ಶೌಚಾಲಯ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು ಸರಿಪಡಿಸಲಾಗುವದು ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭ ಕರವೇ ಜಿಲ್ಲಾಧ್ಯಕ್ಷ ಪಿ.ಕೆ. ಜಗದೀಶ್, ಪ್ರಮುಖರಾದ ರೊನಾಲ್ಡ್ ಇದ್ದರು.