ಭಾಗಮಂಡಲ, ಆ. 5: ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಸಂಬಂಧ ವ್ಯವಸ್ಥಾಪನಾ ಸಮಿತಿ ಕೈಗೊಂಡಿರುವ ಕೆಲಸಗಳ ಬಗ್ಗೆ ಇಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಖುದ್ದು ಮಾಹಿತಿ ಪಡೆದರು. ಈ ಸಂಬಂಧ ಆಯೋಜಿಸಿದ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿಯೊಂದಿಗೆ ರಸ್ತೆ, ಮೇಲ್ಸೇತುವೆ, ಪ್ರವಾಸಿಗರಿಗೆ ಮತ್ತು ಭಕ್ತರಿಗೆ ಮೂಲಭೂತ ಸೌಕರ್ಯ ಕುರಿತು ಅವರು ಮಾಹಿತಿ ಪಡೆದುಕೊಂಡರು.
ಅಲದೆÀ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ 2 ತಿಂಗಳಿಗೊಮ್ಮೆ; ಉಪವಿಭಾಗಾಧಿಕಾರಿಗಳು ಖುದ್ದು ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸುವದರೊಂದಿಗೆ ವ್ಯವಸ್ಥಾಪನಾ ಸಮಿತಿಗೆ ಅಗತ್ಯ ಸಲಹೆ - ಸೂಚನೆ ನೀಡುವಂತೆ ನಿರ್ದೇಶಿಸಿದರು.
ಈ ಸಂದರ್ಭ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಹಾಗೂ ಸದಸ್ಯರು, ತಕ್ಕಮುಖ್ಯಸ್ಥರು, ಅರ್ಚಕರು ಹಾಜರಿದ್ದು, ವಿಷಯಗಳ ಬಗ್ಗೆ ಗಮನ ಸೆಳೆದರು. ಜಿಲ್ಲಾಡಳಿತದಿಂದ ಅಗತ್ಯವಿರುವ ಸಹಕಾರವನ್ನು ತಾವು ಕಲ್ಪಿಸುವದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು. ಕಾ.ನಿ. ಅಧಿಕಾರಿ ಜಗದೀಶ್ ಕುಮಾರ್ ಹಾಗೂ ಪಾರುಪತ್ತೆಗಾರರು, ಸಿಬ್ಬಂದಿ ಹಾಜರಿದ್ದರು.
ಪರಿಶೀಲನೆ
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರುಗಳು ಭಾಗಮಂಡಲಕ್ಕೆ ಭೇಟಿ ನೀಡಿದ ಸಂದರ್ಭ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ತಂಡಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.