ಸೋಮವಾರಪೇಟೆ,ಆ.5: ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯ ಕುಂಬೂರು ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕಾರ್ಮಿಕರು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಿದರು.
ನಿನ್ನೆ ರಾತ್ರಿ ಸುರಿದ ಭಾರೀ ಮಳೆ-ಗಾಳಿಗೆ ಕುಂಬೂರು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಬೆಳಿಗ್ಗೆ ತೋಟ ಕಾರ್ಮಿಕರು ಮರವನ್ನು ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.